ಮಂಡ್ಯ: ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ.
ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು.
ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು. ಆದರೆ ಮಂಡ್ಯವನ್ನು ಹೆಚ್.ಡಿ.ದೇವೇಗೌಡ ಕುಟುಂಬ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.
ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯಬೇಕೆಂದುಕೊಂಡಿದ್ದೆ. ಆದರೆ, ಜನರು ನಮಗೆ ತೋರಿಸುವ ಪ್ರೀತಿ ನೋಡಿದಾಗ ನಿವೃತ್ತಿಯಾದ್ರೆ ಅವರಿಗೆ ಅನ್ಯಾಯ ಮಾಡಿದಂತೆ ಅನಿಸುತ್ತೆ. ಈ ಕಾರಣಕ್ಕಾಗಿಯೇ ರಾಜಕೀಯದಲ್ಲಿ ಮುಂದುವರೆದಿದ್ದೇನೆ. ವೈಯಕ್ತಿಕವಾಗಿ ರಾಜಕೀಯದಲ್ಲಿ ಮುಂದುವರೆಯುವ ಆಸೆಯಿಲ್ಲ ಎಂದು ತಿಳಿಸಿದ್ದಾರೆ.