ದಕ್ಷಿಣ ಕನ್ನಡ: ಜಿಲ್ಲೆಯ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ಹಲವು ತೀವ್ರ ಗಾಯಗೊಂಡಿದ್ದಾರೆ. ಬಸ್ ನಲ್ಲಿ 29 ಜನರ ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ.
ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇ ದುರ್ಘಟನೆ ನಡೆದಿದ್ದು, ಆರೋಗ್ಯವಾಗಿದ್ದವರು ಹಾಗೂ ಸಣ್ಣ ಪುಟ್ಟ ಗಾಯಗಳಾದವರನ್ನು ಬೇರೆ ಬಸ್ ಮೂಲಕ ಬೆಂಗಳೂರಿಗೆ ಕಳಿಸಿದ್ದಾರೆ.
Laxmi News 24×7