Breaking News

ಸಿಬಿಐನಿಂದ ಬಂಧನವಾಗಿರುವ ರೋಷನ್‌ ಬೇಗ್‌ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು.

Spread the love

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿರುವ ರೋಷನ್‌ ಬೇಗ್‌ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರೋಷನ್‌ ಬೇಗ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ವಕ್ಫ್‌ ಖಾತೆಯ ಸಚಿವರಾಗಿದ್ದರು. ಐಎಂಎ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಬಳಿಕ ತಾನು ಯಾವುದೇ ಅಕ್ರಮ ಎಸಗಿಲ್ಲ ಹೇಳಿದ್ದರು. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಸರ್ಕಾರದ ಎಸ್‌ಐಟಿ ತನಿಖೆಗಿಂತ ಸಿಬಿಐ ತನಿಖೆ ನಡೆಸುವುದೇ ಸೂಕ್ತ ಎಂದು ಹೇಳಿದ್ದರು.

ಈ ನಡುವೆ 2019ರಲ್ಲಿ ಕಾಂಗ್ರೆಸ್‌ ಶಾಸಕರ ಜೊತೆ ರೋಷನ್‌ ಬೇಗ್‌ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ಬಿಜೆಪಿ ಸೇರ್ಪಡೆಗೆ ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದರೂ ಹೈಕಮಾಂಡ್‌ ನಾಯಕರು ಒಪ್ಪಿಗೆ ನೀಡಿರಲಿಲ್ಲ.

ಎರಡ್ಮೂರು ಬಾರಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಷ್ಟೇ ಅಲ್ಲದೇ ರೋಷನ್‌ ಬೇಗ್‌ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ರೋಷನ್ ಬೇಗ್ ಸೇರ್ಪಡೆಗೆ ರಾಜ್ಯ ನಾಯಕರು ಒಪ್ಪಿ‌ದ್ದರೂ ಆ ಬಳಿಕ ಹೈಕಮಾಂಡ್ ಕೊಕ್ಕೆ ಹಾಕಿತ್ತು

ಶಿವಾಜಿನಗರ ಉಪಚುನಾವಣೆಯಲ್ಲಿ ಬಿಜೆಪಿ ತನಗೆ ಟಿಕೆಟ್‌ ನೀಡಬಹುದು ಎಂದು ನಿರೀಕ್ಷೆಯಲ್ಲಿ ರೋಷನ್‌ ಬೇಗ್‌ ಇದ್ದರು. ಆದರೆ ಬಿಜೆಪಿ ಸರವಣ ಅವರಿಗೆ ಟಿಕೆಟ್‌ ನೀಡಿತ್ತು. ಹೀಗಿದ್ದರೂ ಬಿಜೆಪಿ ಪರ ಒಳಗೊಳಗೆ ರೋಷನ್‌ ಬೇಗ್‌ ಕೆಲಸ ಮಾಡಿದ್ದರು.

ಐಎಂಎ ಪ್ರಕರಣದಲ್ಲಿ ಸಿಬಿಐನಿಂದ ಪಾರಾಗಲು ರೋಷನ್‌ ಬೇಗ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಗಂಭೀರ ಆರೋಪ ಮಾಡಿದ್ದರು. ಆದರೆ ಬಿಜೆಪಿಗೆ ರೋಷನ್‌ ಬೇಗ್‌ ಸೇರ್ಪಡೆಯಾಗಿರಲಿಲ್ಲ. ಇತ್ತ ಕಾಂಗ್ರೆಸ್‌ ನಾಯಕರ ಬೆಂಬಲವು ಸಿಗಲಿಲ್ಲ.

ಒಂದು ಕಾಲದಲ್ಲಿ ಮುಸ್ಲಿಮರ ಪ್ರಬಲ ನಾಯಕನಾಗಿ ಮೆರೆದಿದ್ದ ರೋಷನ್ ಬೇಗ್ ರಾಜೀನಾಮೆ ಬಳಿಕ ಯಾರ ಬೆಂಬಲ ಇಲ್ಲದ ಕಾರಣ ಒಂಟಿಯಾಗಿದ್ದರು. ಈಗ ಈ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಮೂಲಕ ಐಎಂಎ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮೊದಲ ರಾಜಕಾರಣಿ ರೋಷನ್‌ ಬೇಗ್‌ ಆಗಿದ್ದಾರೆ.

 


Spread the love

About Laxminews 24x7

Check Also

ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the loveಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ