Breaking News

ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ

Spread the love

ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು.

ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ ಆನ್‍ಲೈನ್, ಆಫ್‍ಲೈನ್ ಕ್ಲಾಸ್ ಎರಡೂ ಆರಂಭಿಸಿದ್ದೇವೆ, ಸ್ವಇಚ್ಛೆಯಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕೆ ಆಫ್‍ಲೈನ್ ಕ್ಲಾಸ್ ಶುರು ಮಾಡಿದ್ದೇವೆ. ಸವಾಲಿನ ಮಧ್ಯೆ ವಿದ್ಯಾರ್ಥಿಗಳಿಗಾಗಿ ಉತ್ತಮ ಕಾರ್ಯ ಮಾಡಲಾಗುತ್ತಿದೆ.

ಶಿಕ್ಷಣ, ಕೌಶಲ್ಯ ಎಲ್ಲಾ ಕ್ಷೇತ್ರಗಳಿಗೂ ಪ್ರಥಮ ಅವಶ್ಯಕತೆ ಇರುವಂತದ್ದು, ಶಿಕ್ಷಣ ಕ್ಷೇತ್ರ ಸರಿ ಮಾಡಿದ್ರೆ ಎಲ್ಲವೂ ಸರಿಯಾಗುತ್ತೆ, ಶಿಕ್ಷಣ ಕ್ಷೇತ್ರ ಉತ್ತಮಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡ್ತೀವಿ, ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ವಿಚಾರ, ಕಾಲೇಜು ವಿದ್ಯಾರ್ಥಿಗಳು ಕಾಲೇಜು ಬರುವ ಮುನ್ನ ತಪಾಸಣೆ ಮಾಡ್ತಿದೇವೆ. ತಪಾಸಣೆ ಮಾಡುವ ವೇಳೆ ಪಾಸಿಟಿವ್ ಬಂದವರಿಗೆ ಕಾಲೇಜು ಬರಲು ಅವಕಾಶವಿಲ್ಲ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳಿಗೆ ಆದ್ಯತೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ದಿನೇದಿನೇ ಹೆಚ್ಚೆಚ್ಚು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದಾರೆ ಎಂದು ಅವರು ಹೇಳಿದರು.

 


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ