Breaking News

ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ‌ ಸೂಚನೆ‌

Spread the love

ಬೆಂಗಳೂರು : ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೂಚನೆ‌ ನೀಡಿದ್ದಾರೆ.

ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

 ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ  ರಾಧದೇವಿ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಅನೀಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ