Breaking News

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

Spread the love

ಬೆಂಗಳೂರು, ನ.24- ರಾಜ್ಯದ ಜನಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿರುವ ಒಕ್ಕಲಿಗ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದಾರೆ. ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಸಮಿತಿಯ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿತು.

ನಿಯೋಗದಲ್ಲಿ ತಲಕಾಡು ಚಿಕ್ಕರಂಗೇ ಗೌಡ, ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್, ಬಿಜೆಪಿ ಮುಖಂಡರಾದ ಮಾಗಡಿ ವೇಣುಗೋಪಾಲ್, ಕೆ.ಗಂಗಹನುಮಯ್ಯ ಸೇರಿದಂತೆ ಹಲವರು ಹಾಜರಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎ.ಎಚ್.ಆನಂದ್, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಕಾರ ಮಾಡಿರುವಂತೆಯೇ ರಾಜ್ಯದ ಜನಸಂಖ್ಯೆಯಲ್ಲಿ 2ನೆ ಸ್ಥಾನದಲ್ಲಿರುವ ಒಕ್ಕಲಿಗರ ಕಲ್ಯಾಣಕ್ಕಾಗಿ ಒಕ್ಕಲಿಗ ಅಭಿವೃದ್ಧಿ ಪ್ರಾಕಾರ ರಚನೆ ಮಾಡಬೇಕೆಂದು ಒತ್ತಾಯಿಸಿದರು.

ಸುಮಾರು 5 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಹರಪ್ಪ ಮಹೆಂಜೊದಾರೊ ನಾಗರಿಕತೆಯ ಸೊಗಡನ್ನು ಒಕ್ಕಲಿಗ ಜನಾಂಗ ಉಳಿಸಿ-ಬೆಳೆಸಿಕೊಂಡು ಬರುತ್ತಿದೆ. ಜನರಿಗೆ ಅತ್ಯವಶ್ಯಕವಾಗಿ ಬೇಕಾದ ಆಹಾರ ಧಾನ್ಯಗಳನ್ನು ಬೆಳೆಯುವ ಕೈಂಕರ್ಯದಲ್ಲಿ ತೊಡಗಿರುವ ನಮ್ಮ ಸಮುದಾಯ ಕೃಷಿಯನ್ನೇ ನಂಬಿ ಬದುಕುತ್ತಿದೆ. ಅದರಿಂದ ಉಂಟಾಗುವ ಕಷ್ಟ-ನಷ್ಟಗಳನ್ನು ಅನುಭವಿಸುತ್ತಾ ಬಂದಿದೆ. ಆದರೂ ಸಮುದಾಯದ ಅಭಿವೃದ್ಧಿಗೆ ಯಾವುದೇ ಪ್ರಾಕಾರ ರಚನೆಯಾಗದಿರುವುದು ದುರ್ದೈವದ ಸಂಗತಿ ಎಂದರು.

ತಲಕಾಡು ಎಂಬ ಹೆಸರಿನ ರಾಜ್ಯವನ್ನು ಕಟ್ಟಿದ ಗಂಗರು ಅಪಾರ ಕೊಡುಗೆ ನೀಡಿದ್ದಾರೆ. ಇವರು ವಂಶಸ್ಥರು, ಅದ್ಭುತ ಆಡಳಿತ ನೀಡಿ ಧಾರ್ಮಿಕ, ಸಾಮಾಜಿಕ, ಸಾಂಸ್ಕøತಿಕ, ಕಲೆ-ಸಾಹಿತ್ಯ ಕ್ಷೇತ್ರಗಳಿಗೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ