Breaking News

ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Spread the love

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ.

ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ.

ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ ತನ್ನ ವಶಕ್ಕೆ ನೀಡಬೇಕೆಂದು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಲು ಮುಂದಾಗಿದೆ. ಇನ್ನೆರಡು ದಿನದಲ್ಲಿ ಸಿಬಿಐ ವಶಕ್ಕೆ ಕೋರಲಾಗುವುದು.

ಈ ಮಧ್ಯೆ ಐಪಿಎಸ್ ಅಧಿಕಾರಿ ಅಜಯ ಹಿಲೋರಿಗೂ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ