Breaking News

ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್

Spread the love

ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಂಡ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದ್ದು, ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಸಂಪೂರ್ಣ ನಿಷೇಧ ಆಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2010ರಲ್ಲಿ ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ 1964 ಬದಲಾಗಿ, ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2010ನ್ನು ಅಂದಿನ ನಮ್ಮ ಸರ್ಕಾರದ ಅವಯಲ್ಲಿ ವಿಧಾನಮಂಡಲದಲ್ಲಿ ಮಂಡಿಸಿದ ನಂತರ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ