Breaking News

BIG NEWS: ಬೊಕ್ಕಸಕ್ಕೆ ಹೊರೆ, ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ

Spread the love

ಬೆಂಗಳೂರು,ನ.25- ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆ, ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಹೆಚ್ಚುವರಿಯಾಗಿ 2ರಿಂದ 3 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಪ್ರತಿ ತಿಂಗಳು ಕನಿಷ್ಠವೆಂದರೆ 2 ಕೋಟಿ ಹೊರೆಯಾಗುತ್ತದೆ.

ಯಾವ ಇಲಾಖೆಗಳಲ್ಲಿ ಹೆಚ್ಚುವರಿಯಾಗಿ ಅನಗತ್ಯ ಸಿಬ್ಬಂದಿಗಳಿದ್ದಾರೋ ಅವರನ್ನು ಪುನಃ ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ(ಡಿಪಿಎಆರ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತುತ ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಬಹುಮಹಡಿ ಕಟ್ಟಡದಲ್ಲಿ ಹುದ್ದೆಗಳನ್ನು ಮಂಜೂರು ಮಾಡಲಾಗಿದ್ದು, ಹಾಲಿ 3000 ಜನರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದರಲ್ಲಿ ಪ್ರಮುಖವಾಗಿ ಹಣಕಾಸು, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಬೃಹತ್ ನೀರಾವರಿ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮುಖ್ಯಮಂತ್ರಿಗಳ ಕಾರ್ಯಾಲಯ ಸೇರಿದಂತೆ ಮತ್ತಿತರ ಕಡೆ ಹೆಚ್ಚುವರಿಯಾಗಿ ನಿಯೋಜನೆಗೊಂಡಿದ್ದಾರೆ.
ಈ ಹುದ್ದೆಗಳು ಅನಗತ್ಯವಾಗಿದ್ದು ಜೊತೆಗೆ ಕೆಲವು ಕಡೆ 2-3 ಮಂದಿ ನೌಕರರು ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಂತಹ ಅನಗತ್ಯ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ನಿಯೋಜನೆ ಮಾಡಬೇಕೆಂದು ಡಿಪಿಎಆರ್‍ನ ಹಿರಿಯ ಅಧಿಕಾರಿಯೊಬ್ಬರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಒಂದೇ ಹುದ್ದೆಯಲ್ಲಿರುವ ಹೆಚ್ಚುವರಿ ಸಿಬ್ಬಂದಿಯನ್ನು ರದ್ದುಪಡಿಸಿ ಮಾತೃ ಇಲಾಖೆಗೆ ವರ್ಗಾವಣೆ ಮಾಡಲು ಸಜ್ಜಾಗಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ