Breaking News

ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Spread the love

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ ಗೆ ಡಿಕ್ಕಿಯಾಗಿದೆ.ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರನನ್ನು ಲಾರಿ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ