ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಜೊತೆಗೆ ಇಂದು ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‍ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.
ಡಿಸೆಂಬರ್ 5 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ನೀಡುವಂತೆ ರಾಜ್ಯದ ಹೋಟೆಲ್ ಒಕ್ಕೂಟ, ಲಾರಿ ಮಾಲೀಕರ ಸಂಘ, ಚಾಲಕರ ಸಂಘ, ಖಾಸಗಿ ಬಸ್‍ಗಳ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಗಳ ಜೊತೆಗೆ ಬಂದ್‍ಗೆ ಬೆಂಬಲ ನೀಡುವಂತೆ ಇಂದು ಸಭೆಯಲ್ಲಿ ಚರ್ಚೆ ನಡೆಯಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಮುಖ್ಯಮಂತ್ರಿ ಚಂದ್ರು, ಕನ್ನಡಪರ ಸಂಘಟನೆಗಳ ಮಧ್ಯೆ ಯಾವ ಭಿನ್ನಾಭಿಪ್ರಾಯವಿಲ್ಲ, ಡಿ.5ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಎಲ್ಲ ಸಂಘಟನೆಗಳು ಕೈ ಜೋಡಿಸಿವೆ. ನಾವು ಜೈಲಿಗೆ ಹೋಗಲು ಸಿದ್ಧವಾಗಿದ್ದು ಕರ್ನಾಟಕ ಬಂದ್‍ಗೆ ನಾವು ಹಿಂದೇಟು ಹಾಕಲ್ಲ ಎಂದು ಹೇಲಿದರು.
ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರು, ಕನ್ನಡ ಹೋರಾಟಗಾರರನ್ನು ರೋಲ್ ಕಾಲ್ ಎಂದು ಕರೆಯುವ ಯತ್ನಾಳ್ ಸರಕಾರದಲ್ಲಿ ಒಂದು ದೊಡ್ಡ ರೋಲ್ ಕಾಲ್ ವ್ಯಕ್ತಿಯಾಗಿದ್ದಾರೆ. ಅವರು ಕರ್ನಾಟಕದ ನೆಲದಲ್ಲಿ ಜೀವಿಸಲು ಯೋಗ್ಯವಲ್ಲ ಎಂದು ಆರೋಪಿಸಿದರು.