Breaking News

ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ:

Spread the love

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದರು.

ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದ್ದು, ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೆÇೀಷಕರ ರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್ಲೈನ್ ತರಗತಿ ಸೌಲಭ್ಯ ನೀಡದೇ ಇರುವುದು ಸರಿಯಲ ್ಲಇದು ಬರೀ ಲೂಟಿ ಸರ್ಕಾರ. ಎಂದು ಸಿದ್ದರಾಮಯ್ಯ ಟೀಕಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ