Breaking News

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ: ಶ್ರೀರಾಮುಲು

Spread the love

ಬೆಂಗಳೂರು,: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ ಅವರನ್ನು ನೇಮಿಸಲಾಗಿದೆ. ಸದ್ಯ ಪರಿಶಿಷ್ಟ ಜಾತಿಗೆ ಶೇ. 15 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ. 3 ಮೀಸಲಾತಿ ಇದೆ. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ
ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ. 17, ಪರಿಶಿಷ್ಟ ಪಂಗಡಕ್ಕೆ ಶೇ. 7.5 ಷ್ಟು ನೀಡಿತ್ತು.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆಯಾಗಿದ್ದು, ರಾಜ್ಯದಲ್ಲಿ ಈಗಾಗಲೇ ಕುರುಬ ಸಮುದಾಯ ತಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಬೇಡಿಕೆ ಇಟ್ಟಿದೆ. ಅದೇ ರೀತಿ ಪಂಚಮಸಾಲಿ (ಲಿಂಗಾಯತರು) ಹಿಂದುಳಿದ ವರ್ಗ 3 ಕೆಟಗಿರಿ ಬದಲಿಗೆ 2ಂ ಗೆ ಸೇರ್ಪಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಇಂತಹ ಬೆಳವಣಿಗೆ ನಡುವೆ ಸಚಿವ ಸಂಪುಟ ಸಮಿತಿ ರಚನೆಯಾಗಿದೆ..


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ