Breaking News

ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ

Spread the love

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದರೆ ಅದು ‘ನ್ಯಾಯದ ವಿಡಂಬನೆ’ ಆಗುತ್ತದೆ ಎಂದು ಹೇಳಿ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿತ್ತು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ