ಮುಂಬೈ: ಹಿಂದಿಯ ಮಹಾಭಾರತ ಧಾರಾವಾಹಿಯ ಅರ್ಜುನ ಪಾತ್ರದ ಶಾಹೀರ್ ಶೇಖ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಶಾಹೀರ್ ಶೇಖ್ ಅವರು ನಿರ್ಮಾಪಕಿ ಏಕ್ತಾ ಕಪೂರ್ ಅವರ ಪ್ರೊಡಕ್ಷನ್ ಹೌಸ್‍ನಲ್ಲಿ ಕೆಲಸ ಮಾಡುವ ರುಚಿಕಾ ಕಪೂರ್ ಕೈ ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಈ ಜೋಡಿ ವಿವಾಹವಾಗಿದ್ದು, ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಇಬ್ಬರೂ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ರಿಜಿಸ್ಟರ್ ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
