Breaking News

ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.: ಈಶ್ವರಪ್ಪ

Spread the love

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವುದರಲ್ಲಿ ರಮೇಶ್ ಜಾರಕಿಹೊಳಿ ಅವರ ತಪ್ಪಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ, ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಅವರೂ ಬಿಜೆಪಿ ಅವರೇ ಅವರ ಋಣ ತೀರೀಸಬೇಕಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.

ಕುರುಬ ಸಮುದಾಯವನ್ನು ಎಸ್‍ಟಿ ವರ್ಗಕ್ಕೆ ಸೇರಿಸಬೇಕೆಂದು ಹೋರಾಟ ನಡೆಸಿದ್ದೇವೆ. ನಮ್ಮ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಇದೆ. ಈ ಕುರಿತು ಇಂದು ಬೆಳಗಾವಿಯಲ್ಲಿ ಸಭೆ ಮಾಡುತ್ತೇವೆ. ನಾಳೆ ಬಾಗಲಕೋಟೆಯಲ್ಲಿ ಕುರುಬ ಸಮಾಜದ ವಿಭಾಗ ಮಟ್ಟದ ಸಭೆ ಮಾಡುತ್ತೇವೆ. ಸರ್ಕಾರವೂ ಕುರುಬ ಸಮಾಜವನ್ನು ಎಸ್.ಟಿ ವರ್ಗಕ್ಕೆ ಸೇರಿಸುವುದಕ್ಕಾಗಿ ಅಧ್ಯಯನ ಸಮಿತಿ ರಚಿಸಿದೆ. ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ನಿರ್ಧಾರ ಹೊರಬೀಳಲಿದೆ ಎಂದು ಈಶ್ವರಪ್ಪ ಹೇಳಿದರು.

ಗ್ರಾಮ ಪಂಚಾಯತಿ ಚುನಾವಣೆಗೆ ವಿಶೇಷ ಆದ್ಯತೆ ಕೊಟ್ಟಿದ್ದೇವೆ. ಈ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುತ್ತೇವೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕುರಿತು ಡಿಸೆಂಬರ್ 4 ರಂದು ಬಿಜೆಪಿ ಕೋರ್ ಕಮಿಟಿ ಸಭೆ ಇದೆ.5 ರಂದು ಬೆಳಗಾವಿಯಲ್ಲೇ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ಕುರಿತು ಚರ್ಚೆ ನಡೆಯಲಿದೆ ಎಂದು ಈಶ್ವರಪ್ಪ ಹೇಳಿದರು.


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ