Breaking News

ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ.

ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ಕೋವಿಡ್ ನಿಯಮಾವಳಿಗಳ ಪಾಲನೆ ದೃಷ್ಟಿಯಿಂದ ಸಾಮಾಜಿಕ ವ್ಯಕ್ತಿಗತ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಿ,ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ

Spread the loveತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ