Breaking News

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

Spread the love

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ.

ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ ನಿಂದ ಲಲಿತಾ ಘಾಟ್ ಗೆ ದೋಣಿಯಲ್ಲಿ ಪ್ರಯಾಣಬೆಳೆಸಲಿದ್ದಾರೆ.

ಪ್ರಧಾನಿ ಭೇಟಿಗೆ ಜಿಲ್ಲಾ ಆಡಳಿತ ಸಿದ್ಧತೆ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಗಂಗಾ ಘಾಟ್ ನಲ್ಲಿ ವಿಶೇಷ ಸ್ವಾಗತ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ