Breaking News

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

Spread the love

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೃಷಿ ವೃತ್ತಿಪರ ಕೋರ್ಸ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಹೊಸ ಕೃಷಿ ಕಾಲೇಜು ಪ್ರಾರಂಭಿಸಲು ಖಾಸಗಿಯವರಿಗೆ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ