Breaking News
Home / ರಾಜ್ಯ / ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

Spread the love

ಬಾಗಲಕೋಟೆ: ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಈಕೆಗೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. ಇದೀಗ ಅವರಿಗೆ ಗರ್ಭಪಾತವಾಗಿದೆ.

ನಡೆದಿದ್ದೇನು?:
ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದರು. ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿತ್ತು. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆಯಿಂದ ವರ್ತನೆ ಮಾಡಲಾಗಿತ್ತು. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

 

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ