Breaking News

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

Spread the love

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಅವರು ಸೋತಿದಕ್ಕೆ ಈ ರೀತಿಯ ಹೇಳಿಕೆ ಕೊಡ್ತಾ ಇದ್ದಾರೆ. ಇದು ಮೊದಲ ಬಾರಿಗೆ ಈ ಆರೋಪ ಅಲ್ಲ. ತನಿಖಾ ಸಂಸ್ಥೆ ದಾಳಿ ಮಾಡಿದಾಗಲೂ ಇದೇ ರೀತಿ ಆರೋಪ ಮಾಡುತ್ತಾರೆ. ಡಿಕೆಶಿ ಅವರಿಗೆ ರೆಸ್ಟ್ ಕೊಟ್ಟು ಒಂದು ತಿಂಗಳು ಆಸ್ಪತ್ರೆಗೆ ಸೇರಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ

Spread the loveಬೆಂಗಳೂರು: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ