Breaking News

BIG BREAKING ಕನ್ನಡ ಹೋರಾಟಗಾರರಿಗೆ ಸೆಡ್ಡು-ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ

Spread the love

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಕನ್ನಡ ಹೋರಾಟಗಾರರಿಗೆ ಸೆಡ್ಡು ಹೊಡೆದಿದೆ.ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡ ಹೋರಾಟಗಾರರ ಬಂದ್ ಎಚ್ಚರಿಕೆಗೂ ಸರ್ಕಾರ ಕ್ಯಾರೇ ಎಂದಿಲ್ಲ.

ಮರಾಠ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶಿಸಿದೆ. 5 ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದು, ದುರ್ಯೋಧನ ಐಹೊಳೆ, ನೆಹರು ಓಲೇಕಾರ್, ಮುನಿಕೃಷ್ಣ ನಿಗಮ ಮಂಡಳಿ ಪರಿಷ್ಕೃತಗೊಂಡಿದ್ದು, ಮಾಯಕೊಂಡ ಶಾಸಕ ಲಿಂಗಣ್ಣಗೆ ಲಿಡ್ಕರ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ.

ದುರ್ಯೋಧನ ಐಹೊಳೆಗೆ ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ, ನೆಹರು ಓಲೇಕಾರ್ ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ಸ್ಥಾನ, ಸಿ.ಮುನಿಕೃಷ್ಣಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ಹಾಗೂ ಎಂ.ಕೋಟೆ ಶಿವಣ್ಣಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷ ಸ್ಥಾನಕ್ಕೆ ಬಾಬುವಾಲಿ, ಚನ್ನರಾಯಪಟ್ಟಣ ನಗರ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ಶಿವನಂಜೇಗೌಡ ಹಾಗೂ ಸದಸ್ಯರ ನೇಮಕ ಮಾಡಲಾಗಿದೆ.

ಇತ್ತ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆಗಿದೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರ ವಾಪಸ್‍ಗೆ ಕನ್ನಡ ಹೋರಾಟಗಾರರು ಇಂದು ಗಡುವು ನೀಡಿದ್ದರು. ಆದರೆ ಕನ್ನಡ ಹೋರಾಟಗಾರರ ಎಚ್ಚರಿಕೆಗೆ ಕ್ಯಾರೇ ಎನ್ನದೇ ಸರ್ಕರ ಆದೇಶ ಹೊರಡಿಸಿದೆ. ಹೀಗಾಗಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಬಹುತೇಕ ಖಚಿತವಾಗಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ