Breaking News

ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ.: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ. ಅವರಿಗೆ ಎಲ್ಲ ಸಂದರ್ಭದಲ್ಲಿಯೂ ನಾನು  ಸಂಪೂರ್ಣ ಬೆಂಬಲ ಸೂಚಿಸುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆ ಆಲಿಸಿಬೇಕು ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು,  ದೆಹಲಿಯಲ್ಲಿ ನಡೆಯುವಂತಹ ರೈತರ ಪ್ರತಿಭಟನೆ ಇಡೀ ದೇಶದ ಗಮನ ಸೆಳೆದಿದೆ. ನಿಜವಾಗಿಯೂ ಅವರ ಹೋರಾಟ ನ್ಯಾಯ ಸಮ್ಮತವಾಗಿದೆ. ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಕಳೆದ 6 ದಿನಗಳಿಂದ ರೈತರು ಪ್ರತಿಭಟನೆ ನಡೆಸಿದ್ದಾರೆ. ಆದ ಕಾರಣ ಕೇಂದ್ರ ಸರ್ಕಾರ ಅನ್ನದಾತರ ಸಮಸ್ಯೆಯನ್ನು ಆಲಿಸಿ, ಪರಿಹಾರ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಜತೆಗೆ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ