Home / Uncategorized / ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು

ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು

Spread the love

ಬೆಳಗಾವಿ:  ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ  ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ವಲಸಿಗರು ಹಾಗೂ ಮೂಲ   ಬಿಜೆಪಿಗರ ಮಧ್ಯೆ  ಯಾವುದೇ ತಿಕ್ಕಾಟವಿಲ್ಲ.  ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು.

ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ  ಮಾತನಾಡಿ, ಸದ್ಯ  ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ ಅವಧಿ ವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದ ಅವರು,  ಬೆಳಗಾವಿ ಲೋಕಸಭೆಗೆ ತಾವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ   ಈ ಬಗ್ಗೆ ಯಾರು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು.


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ