Breaking News

ರಮೇಶ್ ಜಾರಕಿಹೊಳಿ ಅವರ ಸವಾಲಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿರುಗೇಟು

Spread the love

ಬೆಳಗಾವಿ: ಮಹದಾಯಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನುಬಾಹಿರವಾಗಿ ನಡೆದುಕೊಂಡಿಲ್ಲ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸವಾಲಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿರುಗೇಟು ನೀಡಿದ್ದಾರೆ.

ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೂರಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ, ಮಹದಾಯಿ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಕಾಮಗಾರಿ ಆರಂಭಿಸಿದ ಬಗ್ಗೆ ಸಾಕ್ಷ್ಯಗಳಿವೆ. ಅವುಗಳನ್ನು ಮರು ಪರಿಶೀಲನಾ ಅರ್ಜಿಯೊಂದಿಗೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ. ನಾವು ಕಾನೂನುಬಾಹಿರವಾಗಿ ನಡೆದುಕೊಂಡಿದ್ದರೆ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ