Breaking News

ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು

Spread the love

ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿಯೆಲ್ಲ ಗರ್ಭಿಣಿ ಮಹಿಳೆ ನೋವಿನಿಂದ ನರಳಿದ್ದರು. ಆದರೂ ವೈದ್ಯರು ಸರಿಯಾಗಿ ಸ್ಪಂದಿಸಲಿಲ್ಲ. ಇಂದು ಸಂಜೆ 4 ಗಂಟೆ ಸುಮಾರಿಗೆ ಹೆರಿಗೆ ಮಾಡಿ ಮಗು ಸಾವನ್ನಪ್ಪಿದೆ ಅಂತಿದ್ದಾರೆ. ನಮಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಮಗು ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ