Breaking News

ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ: ಎಸ್.ಆರ್.ಹಿರೇಮಠ್

Spread the love

ರಾಯಚೂರು: ಒಂದು ತಿಂಗಳಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದೇಗೌಡರು ಹೆಚ್‍ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುವುದಾಗಿ ತಿಳಿಸಿದರು.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ