Breaking News

ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ

Spread the love

ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ.

ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು ಕೇಳಿ ಬಂದಿವೆ.

ಕಾರಾಗೃಹದ ಸಿಬ್ಬಂದಿಯೂ ಸಹ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪವೂ ಸಹ ಕೇಳಿ ಬಂದಿದೆ. ಇದರಿಂದ ಇಂದು ಡಿಐಜಿ ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಸಭೆ ನಡೆಸಿದ ಅವರು, ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿದರು ಮತ್ತು ಮಾಹಿತಿ ಪಡೆದರು.

ಕೊರೊನಾ ಕಾರಣದಿಂದ ಹೊರಗಿನವರ ಭೇಟಿಗೆ ಅವಕಾಶ ಕೊಟ್ಟಿಲ್ಲ. ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಅಂತ ಕಾರಾಗೃಹದ ಸೂಪರಿಂಟೆಂಡೆಂಟ್  ಕೃಷ್ಣಕುಮಾರ್  ಆರೋಪಗಳನ್ನು ತಳ್ಳಿ ಹಾಕಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ