ಮಂಡ್ಯ: 2023 ಕ್ಕೆ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿಯೂ ಪ್ರಬಲವಾಗಿ ಪಕ್ಷ ಬೆಳೆದಿದೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಇದಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲೂ ಪ್ರವಾಸ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಕೇಲವ ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿ ಅಂಥಾ ವಿರೋಧಿಗಳು ಟೀಕಿಸಿದರು. ಅವರು ಎಲ್ಲ ಜಿಲ್ಲೆಗಳಿಗೂ ಅನುದಾನವನ್ನು ಪಕ್ಷಭೇದ ಮರೆತು ನೀಡಿದ್ದಾರೆ. ಮಂಡ್ಯ ಜಿಲ್ಲೆ ಬಗ್ಗೆ ಹೆಚ್ಚು ಅಭಿಮಾನ ಇದ್ದುದರಿಂದ ಸ್ವಲ್ಪ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಕುತಂತ್ರದಿಂದ ನಾನು ಸೋಲು ಅನುಭವಿಸಿದ್ದೇನೆ ಹೊರತು ಮಂಡ್ಯ ಜಿಲ್ಲೆಯ ಜನತೆಯಿಂದಲ್ಲ ಎಂದರು.
Laxmi News 24×7