Breaking News

ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ:H.D.K.

Spread the love

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ.

ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೆ ಹೊರತು ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು. ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲಾ ಎಂದು ರೈತ ಸಾವಿಗೆ ಶರಣಾಗುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ