Breaking News

ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕಾಂಗ್ರೆಸ್ ತಿರುಗೇಟು

Spread the love

ಬೆಂಗಳೂರು: ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರಕಾರವೋ? ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಿಜವಾದ ಹೇಡಿಗಳು ಯಾರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ? ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕೃಷಿ ಸಚಿವರು ಪೆÇನ್ನಂಪೇಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ರೈತರು ಹಾಗು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ