Breaking News

ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ.

ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ.

ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿ ಮುಂದೂಡಿಕೆ ಮಾಡಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.


Spread the love

About Laxminews 24x7

Check Also

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the loveಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ