Breaking News

7.5 ಕೋಟಿ ಪ್ರಶಸ್ತಿ ಗೆದ್ದ ಶಿಕ್ಷಕ..!

Spread the love

ಲಂಡನ್, ಡಿ.4- ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್‍ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ.

ರಣಜಿತ್ ಸಿನ್ಹಾ ಅವರು ಕ್ಯು ಆರ್ ಕೋಡ್ ಅನ್ನು ಪರಿಚಯಿಸಿ ಅದರ ಮೂಲಕ ಬೇರೆ ಭಾಷೆಗಳಲ್ಲಿನ ಪಠ್ಯಪುಸ್ತಕಗಳಲ್ಲಿನ ಪಾಠಗಳನ್ನು ಮಾತೃಭಾಷೆಗೆ ತರ್ಜುಮೆ ಮಾಡಿದ್ದಲ್ಲದೆ, ವಿಡಿಯೋ ಪಾಠ, ಆಡಿಯೋ ಗೀತೆ, ಮಕ್ಕಳಿಗೆ ಇಷ್ಟವಾಗುವಂತಹ ಕಥೆಯನ್ನು ಇದರಲ್ಲಿ ಅಳವಡಿಸಿದ್ದರು. ಈ ಪಠ್ಯವನ್ನು ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಬಳಸಿಕೊಳ್ಳಲು ಅನುಮತಿ ನೀಡಿತ್ತು.ಈ ಬಾರಿಯ ಜಾಗತಿಕ ಶಿಕ್ಷಕ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ವಿಶ್ವದ ಹಲವೆಡೆಯಿಂದ 10 ಮಂದಿ ಪ್ರವೇಶ ಪಡೆದಿದ್ದರು, ಆದರೆ ರಣಜಿತ್ ಸಿನ್ಹಾ 7.5 ಕೋಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.


Spread the love

About Laxminews 24x7

Check Also

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

Spread the love    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ