Breaking News

ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ: ಕಮಲ್ ಪಂಥ್

Spread the love

ಬೆಂಗಳೂರು: ನಾಳೆ ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ. ಈ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಪೊಲೀಸ್ ಇಲಾಖೆ ಭದ್ರತೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 15 ಸಾವಿರಕ್ಕಿಂತ ಹೆಚ್ಚು ಪೊಲೀಸರು ನಾಳೆ ಕಾರ್ಯ ನಿರ್ವಹಿಸಲಿದ್ದಾರೆ. 5 ಜನ ಅಡಿಷನ್ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಿಯೋಜನೆ ಮಾಡಲಾಗುತ್ತದೆ. 35 ಕೆಎಸ್‍ಆರ್‍ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದನೇ ಪ್ರತಿ ಏರಿಯಾದಲ್ಲಿ ಅಧಿಕಾರಿಗಳು ರೌಂಡನ್‍ನಲ್ಲಿ ಇರುತ್ತಾರೆ ಎಂದರು.

ಬಂದ್ ಹಿನ್ನಲೆಯಲ್ಲಿ ಯಾರು ಕೂಡ ಕಾನೂನು ಭಂಗ ಮಾಡುವಂತಿಲ್ಲ. ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ. ಬಂದ್‍ಗಾಗಿ ಯಾರು ಪರ್ಮಿಷನ್ ಕೇಳಿಲ್ಲ. ನಾವು ಯಾವುದೇ ಪರ್ಮಿಷನ್‍ನನ್ನು ಕೊಟ್ಟಿಲ್ಲ. ಯಾರಾದರೂ ಚೇಷ್ಟೆ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ಇರುವುದಿಲ್ಲ. ಯಾವುದೇ ರೀತಿಯ ಕಾನೂನು ಬಾಹೀರ ಘಟನೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಜನಸಾಮಾನ್ಯರು ನಿರ್ಭಯವಾಗಿ ಓಡಾಡ ಬಹುದು. ದಿನದ ಚಟುವಟಿಕೆಗಳಲ್ಲಿ ಎಂದಿನಂತೆ ಮಾಡಿಕೊಳ್ಳಬಹುದು. ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬೆಂಬಲ ಸೂಚಿಸಿಲ್ಲ ಅದನ್ನು ತಡೆಯುವ ಹಾಗೇ ಇಲ್ಲ. ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂಥ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ