Breaking News

ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ

Spread the love

ಬೆಂಗಳೂರು : ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ನೀಡಿದೆ. ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ ಎಂದಿದೆ.

ಪ್ರತಿಭಟನಾ ಮೆರವಣಿಗೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು. ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ. ಅಷ್ಟೇ ಅಲ್ಲದೆ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕು. ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ