Breaking News

ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,

Spread the love

ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು.

ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು.

ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು.

ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರುವಂತೆ ರಾಜ್ಯಸರಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಜೊತೆಗೆ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸಲು ಸಹ ಆಗ್ರಹಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಸಚಿವಸಂಪುಟ ವಿಸ್ತರಣೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ. ಆ ವಿಷಯ ಕೋರ್ ಕಮಿಟಿಗೆ ಬರುವುದಿಲ್ಲ. ಅದು ಮುಖ್ಯಮಂತ್ರಿಗಳಿಗೆ ಪ್ರದತ್ತವಾದ ಅಧಿಕಾರ. ಅವರು ಕೇಂದ್ರ ನಾಯಕರೊಂದಿಗೆ ಚರ್ಚಿಸಿ ನಿರ್ಧರಿಸುತ್ತಾರೆ ಎಂದು ಲಿಂಬಾವಳಿ ತಿಳಿಸಿದರು.

ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಶಾಸಕರು ಇನ್ನು ಮುಂದೆ ಬಹಿರಂಗವಾಗಿ ಹೇಳಿಕೆ ನೀಡಬಾರದು. ಅದು ಆಂತರಿಕ ವಿಷಯ. ಬಹಿರಂಗ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲಿಂಬಾವಳಿ ವಾರ್ನಿಂಗ್ ನೀಡಿದರು.

ಶನಿವಾರ ಬೆಳಗ್ಗೆ 10 ಗಂಟಿಯಿಂದ ಕೋರ್ ಕಮಿಟಿ ಸಭೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ