Breaking News
Home / ಅಂತರಾಷ್ಟ್ರೀಯ / ನವದೆಹಲಿ:ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ

ನವದೆಹಲಿ:ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ

Spread the love

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್‌ 31ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಆದರೆ, ಕೆಲವು ರಾಜ್ಯಗಳು ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಪ್ರಧಾನಿ ಮೋದಿ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ಅನೇಕರು ಈ ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ಕಟ್ಟುನಿಟ್ಟಿನ ಈ ನಿಯಮ ಅನುಸರಿಸುವ ಮೂಲಕ ನಿಮ್ಮ ಮತ್ತು ನಿಮ್ಮ ಕುಟುಂಬದ ಜೀವ ಉಳಿಸಿ. ಈ ನಿಯಮ ಮತ್ತು ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಾನು ರಾಜ್ಯಗಳನ್ನು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ