ಬೆಂಗಳೂರು, ಡಿ.6- ಹಿಂದೆಂದಿಗಿಂತಲೂ ಭಾರೀ ಬಿರುಸಿನ ಸ್ಪರ್ಧೆ ಕಂಡಿರುವ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಾಳೆಯಿಂದ ಆರಂಭಗೊಳ್ಳಲಿದೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ.
113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.11 ಕೊನೆಯ ದಿನವಾಗಿದೆ. ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ನಾಳೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಆಯಾ ಗ್ರಾಮ ಪಂಚಾಯತಿಗಳಲ್ಲಿ ಚುನಾವಣಾ ಅಧಿಕಾರಿಗಳಿಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದು.
ನಾಮಪತ್ರದ ಜೊತೆಗೆ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಹೀಗೆ ಸಲ್ಲಿಸಿದಾಗ ಮಾತ್ರವೇ ನಾಮಪತ್ರ ಊರ್ಜಿತವಾಗುತ್ತದೆ. ಇಲ್ಲವಾದಲ್ಲಿ ನಾಮಪತ್ರಗಳ ಪರಿಶೀಲನೆ ಯಂದು ಅಭ್ಯರ್ಥಿ ಸಲ್ಲಿಸಿದ್ದ ನಾಮಪತ್ರ ತಿರಸ್ಕøತವಾಗುವ ಸಾಧ್ಯತೆ ಇದೆ. ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಡಿ.11ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಡಿ.16.
ಎರಡನೆಯ ಹಂತದಲ್ಲಿ 2830 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 95,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾ ವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಎಲ್ಲಾ ಕಡೆ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಕಡ್ಡಾಯ. ಚುನಾವಣಾ ಪ್ರಚಾರದ ವೇಳೆಯೂ ನಿಯಮಗಳನ್ನು ಪಾಲಿಸಬೇಕು.
Laxmi News 24×7