Breaking News

ಅಮ್ಮನನ್ನ ನೋಡಲು ಆಸ್ಪತ್ರೆಗೆ ಬಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

Spread the love

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನ ನೋಡಲು ಬಂದ ಬಾಲಕಿಯ ವಾರ್ಡ್ ಬಾಯ್ ತನ್ನ ಗೆಳೆಯರ ಜೊತೆ ಸೇರಿ ಅತ್ಯಾಚಾರಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅಪ್ರಾಪ್ತೆ ತಾಯಿ ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತಾಯಿಯನ್ನ ನೋಡಲು ಬರುತ್ತಿದ್ದ ಬಾಲಕಿಯನ್ನ ಆಸ್ಪತ್ರೆಯ ವಾರ್ಡ್ ಬಾಯ್ ಪರಿಚಯ ಮಾಡಿಕೊಂಡಿದ್ದಾನೆ. ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಬಹುತೇಕ ಹೋಟೆಲ್ ಗಳು ಮುಚ್ಚಿವೆ. ಇದನ್ನೇ ಲಾಭವಾಗಿ ಬಳಸಿಕೊಂಡ ಆಸ್ಪತ್ರೆಯ ವಾರ್ಡ್ ಬಾಯ್ ಊಟ ಕೊಡಿಸುವದಾಗಿ ಹೇಳಿ ಬಾಲಕಿಯನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.ಶಿವಮೊಗ್ಗದ ಸಾಗರ ರಸ್ತೆಯಲ್ಲಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯ ವಾರ್ಡ್ ಬಾಯ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಾರ್ಡ್ ಬಾಯ್ ಮೂವರು ಗೆಳೆಯರು ನಾಪತ್ತೆಯಾಗಿದ್ದು, ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚಿಸಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್​ ಪರಿಸ್ಥಿತಿ ಹೇಗಿರಲಿದೆ ಎಂದು ಕಾದು ನೋಡಿ: ವಿಜಯೇಂದ್ರ

Spread the love ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ