ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳುಭಾರತ್ ಬಂದ್ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್ಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆ.
ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಬೆಂಬಲ ಘೋಷಿಸಿವೆ. ಆದರೆ ಕನ್ನಡ ಪರ ಸಂಘಟನೆಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಕೆಲ ಸಂಘಟನೆಗಳು ಬಂದ್ನಲ್ಲಿ ಪಾಲ್ಗೊಳ್ಳುವುದಾಗಿ ಘೋಷಿಸಿದ್ರೆ, ಇನ್ನೂ ಕೆಲವು ಸಂಘಟನೆಗಳು ಕೇವಲ ನೈತಿಕ ಬೆಂಬಲ ಘೋಷಿಸಿ ಸುಮ್ಮನಾಗಿವೆ.
ಬಂದ್ಗೆ ಬೆಂಬಲ ನೀಡಿದವರು ಯಾರು?
ಲಾರಿ ಮಾಲೀಕರ ಸಂಘ, ಎಪಿಎಂಪಿಸಿ ವ್ಯಾಪಾರಿಗಳು, ಕಾರ್ಮಿಕರ ಸಂಘ, ಎಐಟಿಯುಸಿ, ಸಿಐಟಿಯು ಬೆಂಬಲ, ಓಲಾ-ಊಬರ್ ಚಾಲಕರ ಸಂಘ, ಆಟೋ ಸಂಘಟನೆಗಳು, ಖಾಸಗಿ ಶಾಲೆಗಳು ಬೆಂಬಲ ನೀಡಿದ್ದು ನಾಳೆ ಇಡೀ ದಿನ ಆನ್ಲೈನ್ ಕ್ಲಾಸ್ ಇರುವುದಿಲ್ಲ. ಅಂಗನವಾಡಿ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ, ಬ್ಯಾಂಕ್ ಯೂನಿಯನ್ ಬೆಂಬಲ ನೀಡಿವೆ.
ವಾಹನ ಸಂಘಟನೆಗಳು ಬಂದ್ಗೆ ಬೆಂಬಲ ಘೋಷಿಸಿದ್ದರೂ ವಾಹನ ರಸ್ತೆಗೆ ಇಳಿಸಬೇಕೋ ಬೇಡವೋ ಎಂಬುದನ್ನು ಚಾಲಕರ ವಿವೇಚನೆಗೆ ಬಿಡಲಾಗಿದೆ.
ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ, ಕರವೇ ನಾರಾಯಣಗೌಡರ ಬಣದಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಣ ನೈತಿಕ ಬೆಂಬಲ ನೀಡಿವೆ.
Laxmi News 24×7