Breaking News

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಾಲು ಮರದ ತಿಮ್ಮಕ್ಕನವರು ನೆಟ್ಟ ಮರಗಳೆಲ್ಲವೂ ಕುದೂರಿನಿಂದ ಹುಲಿಕಲ್‍ನ ರಾಜ್ಯ ಹೆದ್ದಾರಿಯಲ್ಲಿ ಇಂದಿಗೂ ಇವೆ. ಈಗ ಇವುಗಳನ್ನು ಬೆಳೆಸುವ ಜವಾಬ್ದಾರಿಯನ್ನು ಕರ್ನಾಟಕ ಸರ್ಕಾರ ವಹಿಸಿಕೊಂಡಿದೆ. ಆದ್ರೆ ಇಳಿಯ ವಯಸಿನಲ್ಲೂ ತಿಮ್ಮಕ್ಕ ಅವರು ಮಾತ್ರ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ಸ್ವಾರ್ಥವಿಲ್ಲದೆ ಪರಿಸರಕ್ಕಾಗಿ ಸೇವೆ ಸಲ್ಲಿಸಿದ ತಿಮ್ಮಕ್ಕ ಅವರ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಗಳು ಲಭಿಸಿದೆ. ಬಿಬಿಸಿ 2016ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕೂಡ ಸಾಲು ಮರದ ತಿಮ್ಮಕ್ಕ ಅವರು ಸ್ಥಾನ ಪಡೆದಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ