Breaking News

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ

Spread the love

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು.
ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು.

ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. ಸೋಮವಾರವೇ ಒಪ್ಪಿಗೆ ನೀಡಬೇಕೆಂದು ಆಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದರು. ಚರ್ಚೆಯ ನಡುವೆಯೇ ರೈತ ಸಂಘಟನೆಗಳು ಕರೆ ನೀಡಿರುವ ಮಂಗಳವಾರದ ಬಂದ್ ಕುರಿತೂ ಪ್ರಸ್ತಾಪವಾಯಿತು. ಬಂದ್ ಬೆಂಬಲಿಸುವಂತೆ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಮನವಿ ಮಾಡಿದರು.

‘ನಾವೆಲ್ಲ ರೈತರು ಬೆಳೆದ ಅನ್ನ ತಿನ್ನುವವರು. ನೀವೂ ಅದನ್ನೇ ತಿನ್ನುತ್ತೀರಿ ಎಂದು ಭಾವಿಸಿರುವೆ’ ಎಂದು ಕಾಂಗ್ರೆಸ್‍ನ ಬಿ.ಕೆ. ಹರಿಪ್ರಸಾದ್ ಹೇಳಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಎರಡೂ ಪಕ್ಷಗಳ ಸದಸ್ಯರು ಪರಸ್ಪರರ ವಿರುದ್ಧ ಧಿಕ್ಕಾರ ಕೂಗಿದರು.

ಮಂಗಳವಾರ ಇಡೀ ದಿನ ಮಸೂದೆಯ ಕುರಿತು ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್, ಕಾಂಗ್ರೆಸ್‍ನ ಹಲವು ಸದಸ್ಯರು ಆಗ್ರಹಿಸಿದರು. ಬಿಜೆಪಿ ಸದಸ್ಯರು ಈ ಬೇಡಿಕೆ ವಿರೋಧಿಸಿದರು. ವಾಕ್ಸಮರ ಮುಂದುವರೆಯಿತು. ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ಸದನದ ಕಲಾಪವನ್ನು ಮಂಗಳವಾರ ಬೆಳಿಗ್ಗೆ 11ಕ್ಕೆ ಮುಂದೂಡಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ