Breaking News

ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ

Spread the love

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ.

ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ.

ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು ಕೆ.ಆರ್.ಮಾರುಕಟ್ಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಬೈಕ್‍ನಲ್ಲಿ ತೆರಳಿ ಮನವಿ ಮಾಡಿದರು. ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಬೀದಿ ಬೀದಿಗಳಲ್ಲಿ ಸಂಚರಿಸಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ