ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಕುರಿತು ಕೆಎಸ್‍ಆರ್‍ಟಿಸಿ ಡಿಸಿ ಎಂ ಆರ್ ಮುಂಜಿ ಮಾತನಾಡಿ, ರೈತರ ಪ್ರತಿಭಟನೆಯಿಂದಾಗಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ರೈತರು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.
Laxmi News 24×7