Breaking News

ನಾಳೆ ಸಾರಿಗೆ ನೌಕರರ ಜಾಥಾ ಬಸ್ ರಸ್ತೆಗೆ ಇಳಿಯುವುದು ಡೌಟು!

Spread the love

ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ ಟಿಸಿ, ಬಿಎಂಟಿಸಿ, ಎನ್ ಡ್ ಬ್ಲ್ಯೂ ಕೆಎಸ್ಆರ್ ಟಿಸಿ ಸೇರಿದಂತೆ ವಿವಿಧ ಸಾರಿಗೆ ನೌಕರರು ನಾಳೆ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಹಾಗೂ ಕುಟುಂಬ ಸದಸ್ಯರಿಂದ ಜಾಥಾ ನಡೆಯಲಿದೆ. ಆದರೆ ಕೆಎಸ್ಆರ್ ಟಿಸಿ ನೌಕರರ ಪ್ರಕಾರ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಲ್ಲ ಎನ್ನಲಾಗಿದೆ.

ಇನ್ನು ಬೆಂಗಳೂರಿನಲ್ಲಿ ರೈತ ಸಂಘಟನೆ, ಕಬ್ಬು ಬೆಳೆಗಾರರ ಸಂಘ, ಕಾರ್ಮಿಕ ಸಂಘಟನೆ ಸೇರಿದಂತೆ ಐಕ್ಯ ಸಂಘಟನೆಗಳು ಕೂಡ ನಾಳೆ ಮತ್ತೆ ಪ್ರತಿಭಟನೆ ನಡೆಸಲಿವೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ