ಬೆಂಗಳೂರು,ಡಿ.9- ನೂತನ ಕೃಷಿ ಕಾಯ್ದೆಗಳು ರೈತರಿಗೆ ಮರಣಶಾಸನವಾಗಿದೆ. ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ರಾಜ್ಯ ರೈತ ಸಂಘ, ಹಸಿರುಸೇನೆ ಇಂದು ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ, ಬಾರುಕೋಲು ಚಳುವಳಿಗೆ ಬೆಂಬಲ ನೀಡಿದ ಕರವೇ, ಬಿಬಿಎಂಪಿಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರೈತ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಗೌಡ ಅವರು, ದೇಶದ ಅನ್ನದಾತ ರೈತ ಬೀದಿಗೆ ಬಂದು ಪ್ರತಿಭಟಿಸುತ್ತಿದ್ದಾನೆ. ರಾಜಧಾನಿ ದೆಹಲಿ ಸುತ್ತಮುತ್ತ ಒಂದು ಕೋಟಿಗೂ ಹೆಚ್ಚು ರೈತರು ಚಳವಳಿಯಲ್ಲಿ ಭಾಗವಹಿಸುತ್ತಿದ್ದಾರೆ.
ಕೊರೆಯುವ ಚಳಿಯಲ್ಲಿ ಎಲ್ಲಾ ವಯೋಮಾನದ ರೈತರು, ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪೆÇಲೀಸರು ಆಶ್ರುವಾಯು ಪ್ರಯೋಗಿಸಿದರೂ ಜಗ್ಗದೆ ಹೋರಾಟ ಮುಂದುವರೆಸಿದ್ದಾರೆ.
ಇಡೀ ದೇಶದ ಜನ ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.
Laxmi News 24×7