Breaking News
Home / Uncategorized / ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

Spread the love

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ.

ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.

ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.

ಲಕ್ಷ ದೀಪೋತ್ಸವಕ್ಕೆ ನಾಡಿನ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡುತ್ತಾರೆ. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸುತ್ತಾರೆ. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ.

 

https://www.instagram.com/p/CIk5jsAjWxC/?utm_source=ig_embed


Spread the love

About Laxminews 24x7

Check Also

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

Spread the loveಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ