ಕೋಲ್ಕತ್ತಾ,ಡಿ.10-ಪಶ್ವಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಂಗಾಳದ ದಕ್ಷಿಣ 24 ಪರಗಣ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡುವ ಕಾರ್ಯಕ್ರಮವಿತ್ತು. ಹೀಗಾಗಿ ನಡ್ಡಾ ಭಾಷಣ ಮಾಡುವ ಪ್ರದೇಶದಲ್ಲಿ ಕೇಸರಿ ಬಾವುಟಗಳನ್ನು ಹಾರಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಟಿಎಂಸಿ ಕಾರ್ಯಕರ್ತರು ಬಾವುಟಗಳನ್ನು ಹರಿದುಹಾಕಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಬಂಗಾಳದಲ್ಲಿ ಜಂಗಲ್ ರಾಜ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಉಪಾಧ್ಯಕ್ಷ ಮುಕುಲ್‍ರಾಯ್ ಇದಕ್ಕೆ ತಕ್ಕ ಪ್ರತಿಫಲ ಕಾಣಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಆದರೆ, ಬಿಜೆಪಿ ಆರೋಪವನ್ನು ತಳ್ಳಿ ಹಾಕಿರುವ ಟಿಎಂಸಿ ಮುಖಂಡರು ಬಿಜೆಪಿ ಮುಖಂಡರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ಬಿಜೆಪಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ನಡ್ಡಾ ನಿನ್ನೆ ಕೋಲ್ಕತ್ತಾಗೆ ಆಗಮಸಿದ್ದಾರೆ.