Breaking News

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ

Spread the love

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ

ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್‍ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮೆರವಣಿಗೆ ಕಾರ್ಯಕ್ರಮ ಗುರುವಾರ ನಡೆಯಿತು. ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ನಡೆಯಿತು. ಮಾನವ ಹಕ್ಕುಗಳ ಪರ ಹಾಗೂ ಭ್ರಷ್ಟಾಚಾರ ತೊಲಗಿಸುವ ಸಂಬಂಧ ಈ ವೇಳೆ ಘೋಷಣೆ ಮೊಳಗಿಸಲಾಯಿತು.

ಈ ವೇಳೆ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಘಟಕದ ವಿಜಯಲಕ್ಷ್ಮೀ ಧಾರವಾಡಕರ ಮಾತನಾಡಿ, ಸಮಾಜದಲ್ಲಿ ಬೇರು ಬಿಟ್ಟಿರುವ ಭ್ರಷ್ಟಾಚಾರ, ಶೋಷಣೆ ತೊಲಗಿಸಲು ಮಾನವ ಹಕ್ಕುಗಳ ದಿನಾಚರಣೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಪರಿಸರ ಸಂರಕ್ಷಣೆ, ಸಮಾಜದ ಪ್ರಗತಿ ನಮ್ಮ ಉದ್ದೇಶವಾಗಿದೆ ಎಂದರು.

ಮುಖಂಡ ರವೀಶ ಮಾತನಾಡಿ, ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. 73ನೇ ಮಾನವ ಹಕ್ಕುಗಳ ದಿನಾಚರಣೆ ಮೂಲಕ ಸಮಾದಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು.

ಈ ವೇಳೆ ಶ್ರೀಹರಿಗೌಡ ಮಾತನಾಡಿ, ಭ್ರಷ್ಟಾಚಾರ ಮುಕ್ತ, ಶೋಷಣೆ ಮುಕ್ತ ಸಮಾಜ ನಿರ್ಮಾಣ ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ಸಮಾಜವನ್ನು ಜಾಗೃತಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಈ ವೇಳೆ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಘಟಕದ ಪದಾಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ