Breaking News

ಕೋವಿಡ್ ತಡೆ ಜಾಗೃತಿ ಅಭಿಯಾನ ರ‍್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ

Spread the love

ಬೆಳಗಾವಿಯಲ್ಲಿ ಕೋವಿಡ್ ತಡೆ ಜಾಗೃತಿ ಅಭಿಯಾನ ರ‍್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ

ಕೋವಿಡ್ 19 ಸಾಂಕ್ರಾಮಿಕ ರೋಗ ಪ್ರಸಾರ ತಡೆಗೆ ಜಾಗೃತಿ ಅಭಿಯಾನದ ಅಂಗವಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರೆಡ್ ಕ್ರಾಸ್ ಸೊಸೈಟಿ, ಹೋಂ ಗಾಡ್ರ್ಸ್, ಆರೋಗ್ಯ ಇಲಾಖೆ ಸಹಯೋಗದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕೋವಿಡ್ 19 ಸಾಂಕ್ರಾಮಿಕ ರೋಗ ಪ್ರಸಾರ ತಡೆಗೆ ಜಾಗೃತಿ ಅಭಿಯಾನದ ಅಂಗವಾಗಿ ಗುರುವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಹೋಂ ಗಾರ್ಡ್ ಕಮಾಂಡೆಂಟ್ ಕಿರಣ ನಾಯ್ಕ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಕಾಕತಿ ವೇಸ್ ರಸ್ತೆಯಲ್ಲಿ ಸಾಗಿದ ರ್ಯಾಲಿ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ನಡೆಯಿತು.

ಈ ವೇಳೆ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಅಶೋಕ ಬಾದಾಮಿ, ವಿಕಾಸ ಕಲಘಟಗಿ, ಜಿ.ಕೆ.ಶಿವಯೋಗಿಮಠ, ವಿಜಯ ದೇವರಾಜ ಅರಸ ಮತ್ತಿತರರು ಇದ್ದರು
ಬೆಳಗಾವಿ ವರದಿ ಕುತುಬುದ್ದಿನ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ